ರಾಜ್ಯದಲ್ಲಿ 15 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶೂನ್ಯ

ಬೆಂಗಳೂರು, ನ.2- ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಹಲವು ದಿನಗಳ ಬಳಿಕ ಅತಿ ಕಡಿಮೆ‌ ಸೋಂಕು ದೃಢಪಟ್ಟಿದ್ದು ಇಂದು ಯಾವುದೇ ಸಾವು ಸಂಭವಿಸಿಲ್ಲ

ರಾಜ್ಯದ 15 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶೂನ್ಯ.ಇದುವರೆಗಿನ ಅತಿ ಹೆಚ್ಚಿನ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ಇದಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 239 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 5 ಮಂದಿ ಸಾವನ್ನಪ್ಪಿದ್ದಾರೆ.ಜೊತೆಗೆ 376 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌.

ರಾಜ್ಯದಲ್ಲಿ‌ ಇಂದು ಬಾಗಲಕೋಟೆ, ಬೀದರ್, ಚಾಮರಾಜನಗರ,ದಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ,ರಾಮನಗರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಸೋಂಕು ಪ್ರಕರಣ ದೃಢಪಟ್ಟಿಲ್ಲ.

ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ 29,88,760 ಕ್ಕೆ ಏರಿಕೆಯಾಗಿದೆ.ಇಲ್ಲಿಯ ತನಕ 29,42,272 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 38,089 ಕ್ಕೆ ಏರಿಕೆ.

ರಾಜ್ಯದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 8,370 ಕ್ಕೆ ಕುಸಿದಿದೆ.

ಸೋಂಕಿನಿಂದ ಸಾವನ್ನಪ್ಪಿದವ ಪ್ರತಿಶತ ಪ್ರಮಾಣ ಶೇ.2.09 ಕ್ಕೆ ಏರಿಕೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರತಿಶತ 0.39 ರಷ್ಟು ಇದೆ.

ಬೆಂಗಳೂರಿನಲ್ಲಿ ಏರಿಕೆ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣ ಇಂದು ಏರಿಕೆಯಾಗಿದೆ. 139 ಮಂದಿಗೆ ಕಾಣಿಸಿಕೊಂಡಿದ್ದು, 190 ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಇಂದು 3 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

60 ಸಾವಿರ ಪರೀಕ್ಷೆ:

ರಾಜ್ಯದಲ್ಲಿ ಇಂದು 60,711 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು ಇಲ್ಲಿಯತನಕ ಒಟ್ಟಾರೆಯಾಗಿ 5,10, 07,738 ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇಂದಿನ ಪ್ರಕರಣ

ಜಿಲ್ಲೆ ಎಷ್ಟು

  • ಬಾಗಲಕೋಟೆ- 0
  • ಬಳ್ಳಾರಿ – 0
  • ಬೆಳಗಾವಿ – 6
  • ಬೆಂಗಳೂರು ಗ್ರಾಮಾಂತರ- 1
  • ಬೆಂಗಳೂರು ನಗರ. – 139
  • ಬೀದರ್ 0
  • ಚಾಮರಾಜನಗರ- 0
  • ಚಿಕ್ಕಬಳ್ಳಾಪುರ- 0
  • ಚಿಕ್ಕಮಗಳೂರು- 2
  • ಚಿತ್ರದುರ್ಗ- 0
  • ದಕ್ಷಿಣ ಕನ್ನಡ – 18
  • ದಾವಣಗೆರೆ- 0
  • ಧಾರವಾಡ- 4
  • ಗದಗ- 0
  • ಹಾಸನ- 4
  • ಹಾವೇರಿ- 0
  • ಕಲಬುರಗಿ- 1
  • ಕೊಡಗು- 5
  • ಕೋಲಾರ- 0
  • ಕೊಪ್ಪಳ- 0
  • ಮಂಡ್ಯ- 9
  • ಮೈಸೂರು- 31
  • ರಾಯಚೂರು- 0
  • ರಾಮನಗರ – 0
  • ಶಿವಮೊಗ್ಗ- 1
  • ತುಮಕೂರು- 8
  • ಉಡುಪಿ- 4
  • ಉತ್ತರ ಕನ್ನಡ- 6
  • ವಿಜಯಪುರ – 0
  • ಯಾದಗಿರಿ- 0