ರಾಜ್ಯದಲ್ಲಿ 1781 ಮಂದಿಗೆ ಸೋಂಕು:17 ಮಂದಿ ಸಾವು

ಬೆಂಗಳೂರು ನ. 20-ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಇಂದು ಇಳಿಕೆಯತ್ತ ಸಾಗಿದ್ದು, ರಾಜ್ಯದಲ್ಲಿ 1781 ಮಂದಿಗೆ ಸೋಂಕು ತಗುಲಿದೆ, ಸುಮಾರು 2181 ಮಂಇ‌ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೊನಾ ಸೋಂಕಿಗೆ ರಾಜ್ಯದಲ್ಲಿ 17 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಮೃತರ ಸಂಖ್ಯೆ ಗಣನೀಯ‌ ಇಳಿಕರಯಾಗಿರುವುದು‌ ನೆಮ್ಮದಿ ತಂದಿದೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ869561ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 833169ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 24752 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿಗೆ ಇದುವರೆಗೆ 11621 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ.

ರಾಜ್ಯದಲ್ಲಿ 539ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 1067 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿನ ಸಂಖ್ಯೆ 361654ಕ್ಕೆ ಏರಿಕೆಯಾಗಿದೆ. ನಗರದಲ್ಲು ಕಳೆದ 24ಗಂಟೆಗಳಲ್ಲಿ ಸೊಂಕಿಗೆ ಆರು ಮಂದಿ ಬಲಿಯಾಗಿದ್ದು , ಒಟ್ಟಾರೆ ಸಾವಿನ ಸಂಖ್ಯೆ 4048ಕ್ಕೆ ಏರಿಕೆಯಾಗಿದೆ. ಇಂದು 1254 ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟು17663 ಸಕ್ರಿಯ ಪ್ರಕರಣಗಳಿವೆ

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 23, ಬಳ್ಳಾರಿ 54, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 66 ,ಬೀದರ್ಚಾ6, ಮರಾಜನಗರ 13, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 9, ಚಿತ್ರದುರ್ಗ 33, ದಕ್ಷಿಣ ಕನ್ನಡ 36,;ದಾವಣಗೆರೆ 17, ಧಾರವಾಡ 29, ಗದಗ 11, ಹಾಸನ 28, ಹಾವೇರಿ 8, ಕಲಬುರಗಿ 5, ಕೊಡಗು 7, ಕೋಲಾರ 15, ಕೊಪ್ಪಳ 3, ಮಂಡ್ಯ 66, ಮೈಸೂರು 46, ರಾಯಚೂರು 11, ರಾಮನಗರ 24, ಶಿವಮೊಗ್ಗ 29, ತುಮಕೂರು 48, ಉಡುಪಿ 18, ಉತ್ತರ ಕನ್ನಡ 33, ವಿಜಯಪುರ 20,ಯಾದಗಿರಿ ಜಿಲ್ಲೆಯಲ್ಲಿ 7 ಸೋಂಕು ಪ್ರಕರಣಗಳು ವರದಿಯಾಗಿವೆ.