ರಾಜ್ಯದಲ್ಲಿ 2 ದಿನ ಮಳೆ

ಬೆಂಗಳೂರು, ಮೇ.೧೬- ಬಿಸಿಲ ಬೇಗೆಯಿಂದ ತತ್ತರಿಸುವ ಜನರಿಗೆ ಇನ್ನೆರಡು ದಿನ ಮಳೆರಾಯ ತಂಪೇರೆಯಲಿದ್ದಾನೆ. ರಾಜ್ಯದಲ್ಲಿ ಮುಂದಿನ ಎರಡು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ೨ ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ ೨ ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.