ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ : ದೇಶಮುಖ

ಔರಾದ್ :ಫೆ.17: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ಬೀದರ ಜಿಲ್ಲೆಗೆ ಅನುದಾನ ನೀಡಿದ್ದಾರೆ ಎಂದು ಎಂದು ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಸುನಿಲಕುಮಾರ ದೇಶಮುಖ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತಿ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಬೀದರ್ ನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ದಿಗೆ 1ಕೋಟಿ ರೂ., ಔರಾದ್ ನೀರಾವರಿ ಯೋಜನೆ, ಬೀದರ್- ಬೆಂಗಳೂರು ನಡುವಿನ ಆರ್ಥಿಕ ಕಾರಿಡಾರ್ ರಚನೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದರು.

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‍ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಇಲಾಖೆಗಳಿಗೆ ನಿರೀಕ್ಷಿಸಿದಷ್ಟು ಬಜೆಟ್ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.