
ಕಲಬುರಗಿ:ನ.04:ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಇದೇ ನವೆಂಬರ್ 8 ರಂದು ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 10.45 ಗಂಟೆಗೆ ಆಳಂದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಆಳಂದದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮಧ್ಯಾಹ್ನ 2.55 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.