ರಾಜ್ಯದ ಉಪ ಮುಖ್ಯಮಂತ್ರಿಗಳ ಪ್ರವಾಸ

ಕಲಬುರಗಿ.ಮಾ.29:ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸವದಿ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಮಂಗಳವಾರ ಮಾ. 30 ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರ ಜಿಲ್ಲೆಯ ಬಸವಕಲ್ಯಾಣಕ್ಕೆ ಪ್ರಯಾಣಿಸುವರು.