ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಮಾ.31- ಬಿಬಿಎಂಪಿ ನೂತನ ಆಡಳಿತಾಧಿಕಾರಿ ಆಗಿ ರಾಕೇಶ್ ಸಿಂಗ್ ಅವರನ್ನು ನೇಮಿಸಿ, ರಾಜ್ಯದ ಒಟ್ಟು 16 ಐಎಎಸ್ ಅಧಿಕಾರಿಗಳನ್ನು ದಿಢೀಋ್ ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ- ರಾಜೀವ್ ಚಾವ್ಲಾ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ-ರಾಕೇಶ್ ಸಿಂಗ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಗೌರವ್ ಗುಪ್ತ(ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ).

ಇಂಧನ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ-ಜಿ.ಕುಮಾರ್ ನಾಯ್ಕ್(ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ).

ಮೌಲಸೌಕರ್ಯ ಅಭಿವೃದ್ಧಿ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ-ಕಪೀಲ್ ಮೋಹನ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ- ಎನ್.ಮಂಜುನಾಥ ಪ್ರಸಾದ್ (ವಿಪತ್ತು ನಿರ್ವಹಣೆ, ಭೂಮಿ ಹಾಗೂ ಯುಪಿಓಆರ್ ನ ಸರಕಾರದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ).

ಕರ್ನಾಟಕ ಸಾರ್ವಜನಿಕ ಭೂ ನಿಗಮದ ವ್ಯವಸ್ಥಾಪಕ ನಿರ್ದೇಶಕ- ಡಾ.ಎಚ್.ಎನ್.ಗೋಪಾಲಕೃಷ್ಣ(ಐಟಿಬಿಟಿ ಇಲಾಖೆಯ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ), ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ-ಜಿ.ಎಂ.ಗಂಗಾಧರಸ್ವಾಮಿ(ರಾಜ್ಯ ವಿದ್ಯುತ್ ಪ್ರಸರಣ ನಿಮಗದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ).

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಎಂಎಸ್‍ಎಂಇ ಮತ್ತು ಗಣಿ)ಯ ಸರಕಾರದ ಕಾರ್ಯದರ್ಶಿ-ಪಂಕಜ್ ಕುಮಾರ್ ಪಾಂಡೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಸರಕಾರದ ಕಾರ್ಯದರ್ಶಿ-ವಿ.ಪೊನ್ನುರಾಜ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ- ಸಿಂಧು ಬಿ.ರೂಪೇಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿದೇರ್ಶಕಿ-ಎಸ್.ಹೊನ್ನಾಂಬ, ಸಕಾಲ ಮಿಷನ್ ಹೆಚ್ಚುವರಿ ಯೋಜನಾ ನಿರ್ದೇಶಕಿ- ಡಾ.ಬಿ.ಆರ್.ಮಮತಾ.

ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕಯಾಗಿ ಜಯವಿಭವಸ್ವಾಮಿ(ಶ್ರೀ ಮಲೇಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ). ಅದೇ ರೀತಿ, ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆ.ವಿದ್ಯಾಕುಮಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.