ರಾಜ್ಯದ ಜಲಸಂಪನ್ಮೂಲ ಸಚಿವರ ಪ್ರವಾಸ

ಕಲಬುರಗಿ,ಜ.18:ರಾಜ್ಯದ ಜಲಸಂಪನ್ಮೂಲ ಖಾತೆ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಹೆಲಿಪ್ಯಾಡ್‍ದಿಂದ ಹೆಲಿಕ್ಯಾಪ್ಟರ್ ಮೂಲಕ ಜನವರಿ 19 ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಮಳಖೇಡ ಹೆಲಿಪ್ಯಾಡ್‍ಗೆ ಆಗಮಿಸುವರು.

ನಂತರ ಅಂದು ಮಧ್ಯಾಹ್ನ 2.15 ಗಂಟೆಗೆ ಮಳಖೇಡದಲ್ಲಿ ಪ್ರಧಾನಮಂತ್ರಿಯವರಿಂದ ನೂತನವಾಗಿ ರಚಿಸಲಾಗಿರುವ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಅಂದು ಮಧ್ಯಾಹ್ನ 3.05 ಗಂಟೆಗೆ ಮಳಖೇಡ್ ಹೆಲಿಪ್ಯಾಡ್‍ದಿಂದ ಹೆಲಿಕ್ಯಾಪ್ಟರ್ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಮಧ್ಯಾಹ್ನ 3.35 ಗಂಟೆಗೆ ಪ್ರಧಾನಮಂತ್ರಿಯವರನ್ನು ಬೀಳ್ಕೋಡುವರು. ನಂತರ ಸಚಿವರು ಸಂಜೆ 4.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.