ರಾಜ್ಯದ ಜವಳಿ ಸಚಿವರ ಪ್ರವಾಸ

ಕಲಬುರಗಿ,ಆ.21:ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಆಗಸ್ಟ್ 22 ರಂದು ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಸಚಿವರು ಬೆಳಿಗ್ಗೆ 6.10 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರಕ್ಕೆ ಪ್ರಯಾಣಿಸುವರು.