ರಾಜ್ಯದ ಪೌರಾಡಳಿತ ಹಾಗೂ ಹಜ್ ಸಚಿವರ ಪ್ರವಾಸ

ಕಲಬುರಗಿ,ಸೆ.07:ರಾಜ್ಯದ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸೆಪ್ಟೆಂಬರ್ 8 ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 10.45 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಜ್ಯದ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ ಅವರ ಜಂಟಿ ಅಧ್ಯಕ್ಷತೆಯಲ್ಲಿ ಕಲಬುರಗಿ ವಿಭಾಗಕ್ಕೆ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ, ಕಂದಾಯ ವಿಷಯಗಳು, ಸಾರ್ವಜನಿಕ ಆರೋಗ್ಯ/ ಸೇವೆಗಳ ವಿಷಯಗಳು ಹಾಗೂ ಇತರೆ ವಿಷಯಗಳ ಕುರಿತು ಸಭೆ ಜರುಗಲಿದೆ.