
ಕಲಬುರಗಿ,ಫೆ.24:ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಫೆಬ್ರವರಿ 26 ರಂದು ಭಾನುವಾರ ಸಂಜೆ 4.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಅಂದು ಸಂಜೆ 5 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಆಯೋಜಿಸಿರುವ ಕಲ್ಯಾಣ ಕರ್ನಾಟಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.
ನಂತರ ಸಂಜೆ 6.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರ ಏರ್‍ಬೇಸ್‍ಗೆ ಹೊರಟು, ಅಂದು ರಾತ್ರಿ 8.15 ಗಂಟೆಗೆ ಬೀದರ ಏರ್‍ಬೇಸ್‍ದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.