ರಾಜ್ಯದ ಮುಖ್ಯಮಂತ್ರಿಗಳ ಪ್ರವಾಸ

ಕಲಬುರಗಿ,ಸೆ.16:ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೈದ್ರಾಬಾದ್‍ದಿಂದ ವಿಶೇಷ ವಿಮಾನದ ಮೂಲಕ ಸೆಪ್ಟೆಂಬರ್ 17 ರಂದು ಭಾನುವಾರ ಬೆಳಿಗ್ಗೆ 8.15 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಅಂದು ಬೆಳಿಗ್ಗೆ 8.30 ಗಂಟೆಗೆ ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್‍ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕ ಕಾರ್ಯಕ್ರಮ ಹಾಗೂ ಹೆಲ್ತ್ ಎ.ಟಿ.ಎಂ. ವನ್ನು ಉದ್ಘಾಟಿಸುವರು. ನಂತರ ಹೈಕೋರ್ಟ್ ಹತ್ತಿರ ಇರುವ ಶಾಂತಾ ಆಸ್ಪತ್ರೆಯನ್ನು ಉದ್ಘಾಟಿಸುವರು.

ನಂತರ ಮಧ್ಯಾಹ್ನ 3 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.