ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ,ಜೂ.5:ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜೂನ್ 6 ರಂದು ಮಂಗಳವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಸೇಡಂಗೆ ಪ್ರಯಾಣಿಸಿ ಸೇಡಂ ಮತ್ತು ಮುಧೋಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮರಳಿ ರಾತ್ರಿ 8 ಗಂಟೆಗೆ ಸೇಡಂದಿಂದ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಜೂನ್ 7 ರಂದು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆಟೆರೋಗ ನಿರ್ವಹಣಾ ತರಬೇತಿ ವಾಹನಗಳನ್ನು ಉದ್ಘಾಟಿಸುವರು. ಬೆಳಿಗ್ಗೆ 10.15ಗಂಟೆಗೆ ಕಲಬುರಗಿ ಆಕಾಶವಾಣಿ ಕೇಂದ್ರದಲ್ಲಿ ಕಲಬುರಗಿ ಆಲ್ ಇಂಡಿಯಾ ರೇಡಿಯೋ ಇವರು ಏರ್ಪಡಿಸಲಾದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಸೇಡಂಗೆ ಪ್ರಯಾಣಿಸುವರು.
ಅಂದು ಮಧ್ಯಾಹ್ನ 12.30 ಗಂಟೆಗೆ ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸುವರು. ನಂತರ ರಾತ್ರಿ 8 ಗಂಟೆಗೆ ಸೇಡಂದಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.