ಕಲಬುರಗಿ,ಜೂ.30:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಶನಿವಾರ ಜುಲೈ 1 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಇ.ಎಸ್.ಐ. ಆಸ್ಪತ್ರೆಯಲ್ಲಿ ಏರ್ಪಡಿಸಲಾದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅಂದು ಸಂಜೆ 5 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಸೇಡಂಗೆ ಪ್ರಯಾಣಿಸಿ, ಸಂಜೆ 6 ಗಂಟೆಗೆ ಸೇಡಂ ಪಟ್ಟಣದಲ್ಲಿ ಏರ್ಪಡಿಸಲಾದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸೇಡಂದಿಂದ ರಸ್ತೆ ಮೂಲಕ ಕಲಬುರಗಿಗೆ ಮರಳಿ ರಾತ್ರಿ 9 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡುವರು.