ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ:ಫೆ.23:ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಫೆಬ್ರವರಿ 24 ರಂದು ಶನಿವಾರ ರಾತ್ರಿ 9 ಗಂಟೆಗೆ ಸೇಡಂಗೆ ಆಗಮಿಸುವರು.
ಅಂದು ಬೆಳಿಗ್ಗೆ 9 ಗಂಟೆಗೆ ಸೇಡಂ ಪಟ್ಟಣದಲ್ಲಿ ಏರ್ಪಡಿಸಲಾದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ಸೇಡಂ ತಾಲೂಕಿನ ಊಡಗಿಯಲ್ಲಿ ವಾಸ್ತವ್ಯ ಮಾಡುವರು.
ಫೆಬ್ರವರಿ 25 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಸೇಡಂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಲಾದ ಮೇಘಾ ಐ ಕ್ಯಾಂಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ಗಂಟೆಗೆ ಸೇಡಂ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಂತ ಸೇವಾಲಾಲ್ ಸಮಾಜದವರು ಏರ್ಪಡಿಸಿರುವ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಂದು ಸಂಜೆ 4 ಗಂಟೆಗೆ ಸೇಡಂ-ಕೊಡಂಗಲ್ ರಸ್ತೆಯಲ್ಲಿರುವ ಬಟಗೇರಾ(ಕೆ) ದಲ್ಲಿ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನ್ ನೂತನ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಸೇಡಂದಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.