ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ

ಕಲಬುರಗಿ:ಫೆ.29:ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಾರ್ಚ್ 1 ರಂದು ಶುಕ್ರವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಮಾರ್ಚ್ 2 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಜಯದೇವ ಹೃದ್ಯೋಗ ಆಸ್ಪತ್ರೆಗೆ ಭೇಟಿ ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.

ಮಾಚ್ 3 ರಂದು ಭಾನುವಾರ ಕಲಬುರಗಿ ಸ್ಥಳೀಯ ಕಾರ್ಯಕ್ರಮ ಹಾಗೂ ಅಂದು ಸಂಜೆ 4 ಗಂಟೆಗೆ ಕಲಬುರಗಿ ಕಲ್ಯಾಣ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಮಹಿಪಾಲರೆಡ್ಡಿ ಮುನ್ನೂರ್ ನುಡಿ ಸಾರಥ್ಯದ ‘ಬಿಸಿಲನಾಡಿನ ಬೆಳದಿಂಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಮಾರ್ಚ್ 4 ರಂದು ಸೋಮವಾರ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.