ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಪ್ರವಾಸ

ಕಲಬುರಗಿ,ಜು.06:ರಾಜ್ಯದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಬೀದರದಿಂದ ರಸ್ತೆ ಮೂಲಕ ಜುಲೈ 7 ರಂದು ಶುಕ್ರವಾರ ಸಂಜೆ 7 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.

ಜುಲೈ 8 ರಂದು ಶನಿವಾರ ಕಲಬುರಗಿಯಿಂದ ಜೇವರ್ಗಿಗೆ ಪ್ರಯಾಣಿಸಿ, ಬೆಳಿಗ್ಗೆ 10.30 ಗಂಟೆಗೆ ಜೇವರ್ಗಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 12 ಗಂಟೆಗೆ ಯಾದಗಿರಿ ಜಲ್ಲೆಯ ಶಹಾಪೂರದಲ್ಲಿ ಎ.ಪಿ.ಎಂ.ಸಿ. ವರ್ತಕರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 6.30 ಗಂಟೆಗೆ ಶಹಾಪೂರದಿಂದ ಮರಳಿ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.

ಜುಲೈ 9 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ. ಇಂಜನಿಯರಿಂಗ್ ಕಾಲೇಜಿನಲ್ಲಿ ಕಲಬುರಗಿ ಹೆಚ್.ಕೆ. ಸೊಸೈಟಿ ಇವರು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಂದು ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸಿ ವಾಸ್ತವ್ಯ ಮಾಡುವರು.