ರಾಜ್ಯದ ಸಹಕಾರ ಸಚಿವರ ಪ್ರವಾಸ

ಕಲಬುರಗಿ,ನ.10:ರಾಜ್ಯದ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ನವೆಂಬರ್ 14 ರಂದು ಸೋಮವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಕಲಬುರಗಿ ವಿಮಾನ ನಿಲ್ದಾಣದಿಂದ ಸೇಡಂಗೆ ಪ್ರಯಾಣಿಸಿ, ಅಂದು ಬೆಳಿಗ್ಗೆ 10 ಗಂಟೆಗೆ ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಸೇಡಂದಿಂದ ರಸ್ತೆ ಮೂಲಕ ಮರಳಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಂದು ಮಧ್ಯಾಹ್ನ 3.30 ಕಲಬುರಗಿಯಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು.