ರಾಜ್ಯದ ಹಲವೆಡೆ ಮಳೆ ಚುರುಕು

ಬೆಂಗಳೂರು, ಆಗಸ್ಟ್ ೭- ಕಳೆದ ಒಂದು ವಾರದಿಂದ ಶಾಂತವಾಗಿದ್ದ ವರುಣದೇವ ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ.
ಇಂದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ೫ ದಿನಗಳ ಕಾಲ ಕೊಂಕಣ ಮತ್ತು ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶದಲ್ಲಿ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡು ಮತ್ತು ಕೇರಳದಲ್ಲೂ ಮಳೆ ಕಡಿಮೆಯಾಗಿದೆ. ಆದರೆ ಚಳಿ ಸಣ್ಣ ಪ್ರಮಾಣದಲ್ಲಿ ಹೆಚ್ಚುತ್ತಿದೆ.