
ಬೆಂಗಳೂರು,ಸೆ.೧೯-ಮುಂದಿನ ವಾರದವರೆಗೆ ರಾಜಧಾನಿ ಬೆಂಗಳೂರು ಒಳಗೊಂಡು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯಲಿದೆ.
ಬೆಂಗಳೂರಿನಲ್ಲಿ ನಿನ್ನೆ ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ತುಂಬಾ ಬಿಸಿಲಿನ ತಾಪ ಉಂಟಾಗಿತ್ತು. ಸಂಜೆ ಧಾರಾಕಾರ ಮಳೆ ಸುರಿಯಿತು. ರಾತ್ರಿಯೂ ಕೆಲವೊಂದು ಪ್ರದೇಶಗಳಲ್ಲಿ ಮಳೆಯಾಗಿದೆ. ಬೆಂಗಳೂರಲ್ಲಿ ಇಂದು ಕೂಡಾ ರಬ್ಬಸದ ಮಳೆ ಜೊತೆಗೆ ಕೆಲವೊಮ್ಮೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಾವಣಗೆರೆ, ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಇಂದು ಸಹ ಮಳೆಯಾಗುವ ಬೀಳುವ ಮುನ್ಸೂಚನೆ ನೀಡಲಾಗಿದೆ.
ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.