ರಾಜ್ಯದ ಹಲವೆಡೆ ಮಳೆ

ಬೆಂಗಳೂರು, ಮೇ.೧೦- ರಾಜ್ಯದಲ್ಲಿ ಇಂದು ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ೨ ಗಂಟೆ ನಂತರ ಅಥವಾ ಸಂಜೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದೇ ರೀತಿ, ಕರಾವಳಿಯ ಎರಡು ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಇಂದಿನಿಂದ ೩ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮೇ. ಇಂದಿನಿಂದ ಮೇ. ೧೨ ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂ, ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ಅಲೆ ಎದ್ದಿದ್ದು, ಪರಿಣಾಮ ರಾಜ್ಯದ ಹಲವೆಡೆ ಸೈಕ್ಲೋನ್ ಭೀತಿ ಕೂಡ ಕಾಡುತ್ತಿದೆ.