ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ

ಬೆಂಗಳೂರು, ಜೂ.೬- ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ. ಮುಂಗಾರು ಮಳೆಯ ಹೆಚ್ಚು ಅರ್ಭಟವಿರುವ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್? ಘೋಷಿಸಲಾಗಿದೆ. ಮಲೆನಾಡಿನಲ್ಲೂ ಮಳೆಯ ಅಬ್ಬರ ಶುರುವಾಗಿದ್ದು, ರೈತರು ಮಳೆಗಾಲದ ತಯಾರಿಯಲ್ಲಿ ತೊಡಗಿದ್ದಾರೆ.
ರಾಜ್ಯದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್? ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ ರಾಜ್ಯದಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟಿಸಲಿದೆ.
ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರಕನ್ನಡದಲ್ಲಿ ನಿನ್ನೆ ಸಂಜೆಯಿಂದ ಆರಂಭವಾದ ಮಳೆ ಇಂದು ಮುಂಜಾನೆಯವರೆಗೂ ಒಂದೇ ಸಮನೆ ಆರ್ಭಟಿಸಿದೆ. ಮುಂಗಾರು ಆಗಮನವಾದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಜೂನ್ ೩ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಅದರ ಪರಿಣಾಮವಾಗಿ ಮಲೆನಾಡು,ಕರಾವಳಿ ತೀರದಲ್ಲೂ ವ್ಯಾಪಕ ಮಳೆಯಾಗುತ್ತಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್? ಘೋಷಿಸಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಕಾರಣಕ್ಕೆ ಹಳದಿ ಅಲರ್ಟ್? ಘೋಷಿಸಲಾಗಿದೆ.
ಮಲೆನಾಡು, ಕರಾವಳಿ ಮಾತ್ರವಲ್ಲದೆ ವಿಜಯಪುರ, ಬೆಳಗಾವಿ, ಗದಗ ಭಾಗದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಜೂನ್ ೩ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ. ಆದರೆ, ಈಗಾಗಲೇ ರಾಜ್ಯಕ್ಕೆ ನೈರುತ್ಯ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.
ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್? ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಮಾಹೆ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್?ನಿಂದ ಸೆಪ್ಟೆಂಬರ್?ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಮುಂಗಾರು ಮಳೆಯು ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಗುಡುಗು- ಸಿಡಿಲು ಸಹಿತ ಮಳೆ ಮುಂದುವರೆಯಲಿದೆ.