
ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೨೦: ರಾಜ್ಯಪಾಲರಾದ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಇಂದೊAದು ಸೌಹಾರ್ದ ಭೇಟಿಯಾಗಿದ್ದು, ಈ ಹಿಂದೆ ರಾಜ್ಯಪಾಲರು ದಾವಣಗೆರೆಗೆ ಆಗಮಿಸಿದಾಗ ಎಸ್ಸೆಸ್ ಅವರು ಮನೆಗೆ ಆಹ್ವಾನಿಸಿದ್ದರು. ಆದರೆ ಕಾರಣಾಂತರಗಳಿAದ ಆಗಮಿಸಲು ಸಾಧ್ಯವಾಗದ ಕಾರಣ ರಾಜ್ಯಪಾಲರೇ ಎಸ್ಸೆಸ್ ಅವರನ್ನು ರಾಜಭವನಕ್ಕೆ ಆಹ್ವಾನಿಸಿ ಸತ್ಕರಿಸಿದರು.ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ರಾಜು ಭಂಡಾರಿ, ಹರೀಶ್, ಆಲೂರು ರಾಜಶೇಖರ್ ಇದ್ದರು.