ರಾಜ್ಯಪಾಲರ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಬೀದರ: ಅ.14: ಅಕ್ಟೋಬರ್ 15 ಮತ್ತು 16 ರಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೀದರ ಜಿಲ್ಲಾ ಪ್ರವಾಸ ಕೈಗೊಂಡಿದ್ದು. ಈ ಸಂದರ್ಭದಲ್ಲಿ ಯಾವುದೇ ಭದ್ರತಾ ಲೋಪವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರಾಜ್ಯಪಾಲರ ಜಿಲ್ಲಾ ಪ್ರವಾಸದ ಹಿಲ್ಲೆಯಲ್ಲಿ ಭದ್ರತೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯಪಾಲರಿಗೆ ನೀಡುವ ಅಹಾರದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಅವರು ತಂಗುವ ಅಥಿತಿ ಗೃಹದಲ್ಲಿ ವಿದ್ಯುತ ಕಡಿತಗೊಳ್ಳದಂತೆ ಕ್ರಮವಹಿಸಬೇಕು ಹಾಗೂ ಅಂಬುಲೇನ್ಸ್ ಹಾಗೂ ವೈದ್ಯರ ವ್ಯವಸ್ಥೆ ಮಾಡಬೇಕು. ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಎಲ್ಲಾ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ., ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ನಗರಸಭೆ ಆಯುಕ್ತ ಶಿವರಾಜ ರಾಠೋಡ, ಅಗ್ನೀ ಶಾಮಕ ಅಧಿಕಾರಿ ಸೇರಿದಂತೆ ಇತರೆ ಜಿಲ್ಲಾ ಹಾಗೂ ತಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.