ರಾಜ್ಯಮಟ್ಟಕ್ಕೆ ಆಯ್ಕೆ

ಬಾದಾಮಿ,ಡಿ26: ತಾಲೂಕಿನ ಕಾತರಕಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ಮಹಮ್ಮದ್ ಅರ್ಹಾನ್ ಸೋಲಾಪುರ ಈತ ಈಚೆಗೆ ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಧಾರ್ಮಿಕ ಪಠಣ ಅರಬಿಕ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಿ.ಕೆ.ನಂದನೂರ ಅವರು ಪ್ರಶಸ್ತಿ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಎಚ್.ಜಿ.ಮಿರ್ಜಿ, ಎಸ್.ಎಸ್.ಕೆ.ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಸಿ.ಆರ್.ಓಣಿ ಹಾಜರಿದ್ದರು.
ಅಭಿನಂದನೆ: ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಯನ್ನು ಬಿಇಒ ಎನ್.ವೈ.ಕುಂದರಗಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನವರ, ಮುಖ್ಯಶಿಕ್ಷಕ ಆರ್.ಎಂ.ಸಾರವಾಡ, ಪಾಲಕರು, ಸಹಶಿಕ್ಷಕರು, ಎಸ್.ಡಿ.ಎಂ.ಸಿ.ಪದಾಧಿಕಾರಿಗಳು ಅಭಿನಂದಿಸಿದ್ದಾರೆ.