ರಾಜ್ಯಮಟ್ಟಕ್ಕೆ ಲಕ್ಷ್ಮೀ ಕಲಾಲ ಆಯ್ಕೆ

ವಿಜಯಪುರ, ಜ.2-ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ವಿಜಯಪುರದಲ್ಲಿ ಬಿ.ಎಸ್ಸಿ. 3ನೇ ಸೆಮಿಸ್ಟರ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಕುಮಾರಿ ಲಕ್ಷ್ಮೀ ಕಲಾಲ ಇವರು ಮತದಾರರ ಸಾಕ್ಷರತಾ ಸಂಘದ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಎಸ್. ಕಲ್ಲೂರಮಠ, ಮತದಾರರ ಸಾಕ್ಷರತಾ ಸಂಘದ ಸಂಚಾಲಕರಾದ ಪ್ರೊ. ಚಿದಾನಂದ ಎಸ್. ಆನೂರ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.