ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪರಮೇಶ್ವರಯ್ಯ ಸೊಪ್ಪಿಮಠ ಆಯ್ಕೆ

ಹಗರಿಬೊಮ್ಮನಹಳ್ಳಿ. ಸೆ.03 ಕಳೆದ 30ವರ್ಷಗಳ ನಂತರ ತಾಲೂಕಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪರಮೇಶ್ವರ ಸೊಪ್ಪಿನಮಠ ಆಯ್ಕೆಯಾಗಿದ್ದಾರೆ. ತಾಲೂಕಿನ ಮಾಲವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ರಾಗಿ ಸೇವೆಸಲ್ಲಿಸುತ್ತಿರುವ  ಇವರಿಗೆ ಈ ಸಾಲಿನ ಅತ್ಯುತ್ತಮ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಲಭಿಸಿರುವುದಕ್ಕೆ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಸೆಪ್ಟಂಬರ್ 5ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ವಾಗಲಿದ್ದು ಇವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ಶಾಲೆಯ ಸಿಬ್ಬಂದಿ ಹಾಗೂ ಊರಿನ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
 ಶಿಕ್ಷಕ ನಿರಂತರವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕನನ್ನು ಸಮಾಜ ಮತ್ತು ಇಲಾಖೆ ಗುರುತಿಸಿ ಪ್ರಸಸ್ತಿ ನೀಡಿರುವುದಕ್ಕೆ ಸಂತಸವಾಗಿದೆ ಎಂದು ತಿಳಿಸಿದರು.