ರಾಜ್ಯಮಟ್ಟದ ಚಿಂತನ ಮಂಥನ ಕಾರ್ಯಕ್ರಮ

ದಾವಣಗೆರೆ.ಜು.24:  ಜಿಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟವು ಜುಲೈ 25ರಂದು ಖಾಸಗಿ ಶಾಲೆಗಳಲ್ಲಿ ಶೈಕ್ಷಣಿಕ ಬಲವರ್ಧನೆಗಾಗಿ ರಾಜ್ಯಮಟ್ಟದ ಚಿಂತನ ಮಂಥನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂದು ಬೆಳಿಗ್ಗೆ 10.30ಕ್ಕೆ ಕುಂದುವಾಡ ರಸ್ತೆಯ ಬಂಟರ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ. ರಾಮಮೂರ್ತಿ ಅವರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಬೆಂಗಳೂರಿನ  ರುಪ್ಪಾ ಸಹಯೋಗದಲ್ಲಿ ಕಾರ್ಯಾಗಾರ ನಡೆಯಲಿದ್ದು, ಶಾಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಕುರಿತು ಚಿಂತನ – ಮಂಥನ ಜರುಗಲಿದೆ ಎಂದು ಮಾಹಿತಿ ನೀಡಿದ ಅವರು, ವಿಶೇಷ ಆಹ್ವಾನಿತರಾಗಿ ಲೋಕೋಪಯೋ ಇಲಾಖೆಯ ಕಾರ್ಯದರ್ಶಿ ಡಾ. ಕೆ. ಎಸ್.ಕೃಷ್ಣಾರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕ ಎಂ. ಎಸ್. ಪ್ರಸನ್ನಕುಮಾರ್ ಭಾಗವಹಿಸಲಿದ್ದು, ರುಪ್ಸಾ ರಾಜ್ಯಾಧ್ಯಕ್ಷ  ಲೋಕೇಶ್ ತಾಳಿಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ.  ಡ್ಯಾಮ್ಸ್ ಸಂಘಟನೆಯ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಅಧ್ಯಕ್ಷ ಟಿ. ಎಂ. ಉಮಾಪತಯ್ಯ, ಸಹ ಕಾರ್ಯದರ್ಶಿ ಕೆ. ಎಸ್. ಮಂಜುನಾಥ ಅಗಡಿ ಹಾಗೂ ಸಂಚಾಲಕ ಕೆ. ಎಸ್. ಪ್ರಭುಕುಮಾರ್ ಹಾಜರಿದ್ದರು.