ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ

ಹುಮನಾಬಾದ್ :ಆ.2:ಚಿಟಗುಪ್ಪ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯ ಆವರಣದಲ್ಲಿ ಚಿತ್ರಕಲಾ ಶಿಕ್ಷಕ ಗುಂಡಪ್ಪಾ.ಬಿ.ಕೋರೆ ರವರ ನೇತೃತ್ವದಲ್ಲಿ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ಮಕ್ಕಳಿಗೆ ನನ್ನ ನೆಚ್ಚಿನ ಶಾಲೆ. ಹಾಗೂ 9ನೇ ತರಗತಿಯ ಮಕ್ಕಳಿಗೆ ಪರಿಸರ ಸಂರಕ್ಷಣೆ. ಹಾಗೂ ಹತ್ತನೇ ತರಗತಿಯ ಮಕ್ಕಳಿಗೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದೃಶ್ಯ.ಹೀಗೆ ವಿವಿಧ ರೀತಿಯ ವಿಷಯಗಳನ್ನು ನೀಡಿ ಮಕ್ಕಳಿಗೆ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಸರುಬಾಯಿ.ಆರ್.ಪವಾರ. ಸಂಜೀವನ್ ಎಸ್ ಬೋಸ್ಲೆ. ಬಸವರಾಜ್ ಮೆತ್ರಿ ಶಿಕ್ಷಕರು. ಶಾಲೆಯ ಎಲ್ಲಾ ಮಕ್ಕಳಿಗೆ ಈ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಮಾಡಿದರು