ರಾಜ್ಯಮಟ್ಟದ ಸಮ್ಮೇಳನಕ್ಕೆ ಜಿಲ್ಲೆಯ 100 ಹಿಂದಿ ಶಿಕ್ಷಕರು

ಬೀದರ್: ಸೆ.27:ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ವತಿಯಿಂದ ವಿಜಯಪುರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಸೆ. 29 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿರುವ ರಾಜ್ಯಮಟ್ಟದ ಪ್ರೌಢಶಾಲಾ ಹಿಂದಿ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಹಾಗೂ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಜಿಲ್ಲೆಯ 100 ಹಿಂದಿ ಶಿಕ್ಷಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಸಿರಾಜ್ ಹೇಳಿದ್ದಾರೆ.

ಈಗಾಗಲೇ 75 ಶಿಕ್ಷಕರು ಸಂಘದಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ. ಆಸಕ್ತ ಶಿಕ್ಷಕರು ಸೆ. 27 ರ ಒಳಗೆ ಹೆಸರು ನೋಂದಾಯಿಸಬಹುದಾಗಿದೆ ಎಂದು ಹೇಳಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಹಿಂದಿ ಭಾಷೆ ರಾಜ್ಯಮಟ್ಟದ ವೆಬ್‍ಸೈಟ್ ಉದ್ಘಾಟನೆ, ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ತಿಳಿಸಿದ್ದಾರೆ.