ರಾಜ್ಯಮಟ್ಟದ ಸ್ಪರ್ಧೆಗೆ ಹವಳಗಾ ಸರ್ಕಾರಿ ಶಾಲೆಯ ಮಕ್ಕಳು ಆಯ್ಕೆ

ಅಫಜಲಪುರ:ಮೇ.31: ರಾಷ್ಟ್ರೀಯ ಯೋಗ 2024 ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಹವಳಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸಾವಿತ್ರಿ ಖಂಡೋಬ ಕರಲಗಿ ಹಾಗೂ ಶರಣಬಸು ಹನುಮಂತ ಪೂಜಾರಿ ಇವರು ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದ ಸ್ಪರ್ಧೆಯು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿದ್ದು ಜೂ. 4 ರಂದು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಗುರು ಶ್ರೀಶೈಲ ಜಗದಿ, ಸಮಸ್ತ ಶಿಕ್ಷಕ ವೃಂದ, ಎಸ್. ಡಿ. ಎಂ. ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಪೆÇೀಷಕರು ಹರ್ಷ ವ್ಯಕ್ತಪಡಿಸಿದ್ದಾರೆ.