ರಾಜ್ಯಮಟ್ಟದ ಸ್ಪರ್ಧೆ: ಜನಸೇವಾ ಶಾಲೆ ಮಕ್ಕಳ ಸಾಧನೆ

ಬೀದರ್: ಸೆ.12:ಕಲಬುರಗಿ ಜಿಲ್ಲೆಯ ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕದ ರಾಜ್ಯಮಟ್ಟದ ಜ್ಞಾನ ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ಇಲ್ಲಿಯ ಜನಸೇವಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.

ವಿವರ ಹೀಗಿದೆ. ಹಿರಿಯ ಪ್ರಾಥಮಿಕ ಶಾಲೆ ವಿಭಾಗದ ವೇದ ಗಣಿತ ರಸಪ್ರಶ್ನೆ ಸ್ಪರ್ಧೆ:

ಮಹೇಶ್ವರಿ ಮಹಾದೇವ, ಆಕಾಶ ಜಗನ್ನಾಥ ಮತ್ತು ಮಹಾಂತೇಶ ಶಿವರಾಜ(ಪ್ರಥಮ).

ಪ್ರೌಢಶಾಲಾ ವಿಭಾಗದ ವೇದ ಗಣಿತ ರಸಪ್ರಶ್ನೆ ಸ್ಪರ್ಧೆ: ವಿನೋದ ಹಣಮಂತ, ಸಂದೀಪ ರಾಮಯ್ಯ ಹಾಗೂ ಶಶಿಕಾಂತ ಸಂಗಪ್ಪ(ಪ್ರಥಮ).

ಪ್ರಾಥಮಿಕ ಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಸ್ವರ್ಣವೇಣಿ ಭೀಮಸೇನ್(ದ್ವಿತೀಯ).

ಸಂಸ್ಕøತ ಜ್ಞಾನ ಪರಿಚಯ ರಸಪ್ರಶ್ನೆ ಸ್ಪರ್ಧೆ: ಋತುಜಾ ನಂದಕುಮಾರ, ಧನಲಕ್ಷ್ಮಿವೀರಯ್ಯ ಸ್ವಾಮಿ ಮತ್ತು ಗಣೇಶ ಶರಣಪ್ಪ (ತೃತೀಯ).

ಸನ್ಮಾನ: ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಸೋಮವಾರ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಶಾಲೆ ವಿದ್ಯಾರ್ಥಿಗಳು ವಿದ್ಯಾಭಾರತಿ ಕರ್ನಾಟಕದ ರಾಜ್ಯಮಟ್ಟದ ಜ್ಞಾನ ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ಅಮೋಘ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ ವಿದ್ಯಾರ್ಥಿಗಳು ಅಕ್ಟೋಬರ್ 1 ಮತ್ತು 2 ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ಕ್ಷೇತ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ವಿಜೇತರಾದವರು ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆಯಲಿದ್ದಾರೆ ಎಂದು ಹೇಳಿದರು.

ಘೋಷ್ ತಂಡದ ವಿರೂಪಾಕ್ಷ ಸೇಡಂ, ಪ್ರೌಢಶಾಲೆ ಮುಖ್ಯಶಿಕ್ಷಕ ರಾಹುಲ್ ನೆಟ್ಟೆಕರ್, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ನೀಲಮ್ಮ ಚಾಮರೆಡ್ಡಿ, ಶಿಕ್ಷಕರಾದ ಅಮಿತಕುಮಾರ, ಸತೀಶಕುಮಾರ ಇದ್ದರು. ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪಾಲಕರು ಪಾಲ್ಗೊಂಡಿದ್ದರು.