ರಾಜ್ಯಸಭೆಗೆ ಡಾ.ಸುಧಾಮೂರ್ತಿ ನಾಮನಿರ್ದೇಶನ: ಅಭಿನಂದನೆ ಸಲ್ಲಿಸಿದ ಮರತೂರಕರ್

ಕಲಬುರಗಿ:ಮಾ.9: ರಾಜ್ಯಸಭೆಗೆ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರನ್ನ ನಾಮನಿರ್ದೇಶನ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಡಾ.ಸುಧಾಮೂರ್ತಿ ಅವರಿಗೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಹುಬ್ಬಳ್ಳಿಯ ಹೆಮ್ಮೆಯ ಪುತ್ರಿ ಡಾ. ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದು ಸಂತಸ ತಂದಿದೆ. ಹೀಗಾಗಿ ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾಗೆಯೇ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.ಸಮಾಜ ಸೇವೆ ಮತ್ತ ಶಿಕ್ಷಣ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮಥ್ರ್ಯಕ್ಕೆ ಇದು ಉದಾಹರಣೆಯಾಗಿದೆ ಎಂದು ಅವರು ಹೇಳಿದರು.