ರಾಜ್ಯಸಭೆಯಲ್ಲಿ ಕೊರೊನಾ ಪ್ರತಿಧ್ವನಿ ಮಾತಿನ ಚಕಮಕಿ

ನವದೆಹಲಿ. ಸೆಪ್ಟೆಂಬರ್ . ೧೬. ದೇಶವಾಸಿಗಳನ್ನು ಪೆಡಂಭೂತದಂತೆ ಹಗಲಿರುಳು ಕಾಡುತ್ತಿರುವ ಹಾಗೂ ದಿನನಿತ್ಯ ಆತಂಕವನ್ನು ಹೆಚ್ಚಿಸುತ್ತಿರುವ ಕೋರೋನಾ ಮಹಾಮಾರಿ ಅಬ್ಬರ ವಿಚಾರ ರಾಜ್ಯಸಭೆಯಲ್ಲಿಂದು ಪ್ರತಿಧ್ವನಿಸಿ ,ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ಹಾಗೂ ವಾಗ್ವಾದ ಕಾರಣವಾಗಿ ಇಡೀ ಸದನ ಗೊಂದಲದ ಗೂಡಾಗಿತ್ತು.
ಕಾಂಗ್ರೆಸ್ ಸೇರಿದಂತೆ ಇತರ ಎಲ್ಲಾ ವಿರೋಧ ಪಕ್ಷಗಳ ಸದಸ್ಯರು ಮಹಾಮಾರಿಯನ್ನ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡರು. ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಆಡಳಿತ ಪಕ್ಷದ ಸದಸ್ಯರು ಮಾರಣಾಂತಿಕ ರೋಗವನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮರ್ಥಿಸಿಕೊಳ್ಳಲು ಮುಂದಾದಾಗ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಏರಿದ ದನಿಯಲ್ಲಿ ಮಾತಿನ ಚಕಮಕಿ ಉಂಟಾಗಿ ಭಾರೀ ಕೋಲಾಹಲ ವಾತಾವರಣ ನಿರ್ಮಾಣವಾಗಿತ್ತು.
ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಿಯಮಗಳು ಅವೈಜ್ಞಾನಿಕವಾಗಿದ್ದು ಇದರಿಂದ ಜನಸಾಮಾನ್ಯರು, ವಲಸೆ ಕಾರ್ಮಿಕರು ,ಅಸಂಘಟಿತ ವಲಯದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ದುಡಿಮೆಯನ್ನೇ ನಂಬಿಕೊಂಡಿದ್ದ ಕೋಟ್ಯಂತರ ಜನರು ಹಾಗೂ ಬಡವರು ಒಂದು ಹೊತ್ತಿನ ಊಟಕ್ಕೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಲಾಕ್ ಡೌನ್ನಿಯಮಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಹಳ್ಳ ಹಿಡಿದಿದ್ದು , ಅನ್ಲಾಕ್ ನಿಯಮಗಳು ಜಾರಿಗೆ ಬಂದರೂ ಇನ್ನೂ ಸರಿದಾರಿಗೆ ಬರಲು ಸಾಧ್ಯವಾಗಿಲ್ಲ.
ಕೈಗಾರಿಕೆಗಳು ಸೇರಿದಂತೆ ಎಲ್ಲ ಉದ್ಯಮಗಳು ಮಕಾಡೆ ಮಲಗಿ ದೇಶದ ಆರ್ಥಿಕತೆ ಮಂಕಾಗಿದೆ ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ದಿಷ್ಟ ಕ್ರಮಗಳನ್ನು ಯೋಜನೆಗಳನ್ನು ಇದುವರೆಗೂ ಪ್ರಕಟಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಸಾಂಕ್ರಾಮಿಕ ರೋಗ ದಿನೇದಿನೇ ವ್ಯಾಪಕವಾಗಿ ಹಡುತ್ತಿದ್ದರು ಅದನ್ನು ನಿಯಂತ್ರಿಸಲು ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿದರು ಅಲ್ಲದೆ ರಾಷ್ಟ್ರೀಯ ವಿಕೋಪ ವಾಗಿ ಪರಿಣಮಿಸಿರುವ ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಕಿಡಿಕಾರಿದರು.
ಕೊರೋಣ ಮಹಾಮಾರಿಯನ್ನು ನಿಯಂತ್ರಿಸಲು ಏಕಾಏಕಿ ಜಾರಿಗೆ ಲಾಕ್ಡೌನ್ ನಿಯಮಗಳಿಂದಾಗಿ ಜನರು ತತ್ತರಿಸುವಂತಾಗಿದೆ. ಯಾವುದೇ ರೀತಿಯ ಮುನ್ಸೂಚನೆ ನೀಡದೆ ಕೇವಲ ನಾಲ್ಕು ಗಂಟೆಗಳ ಅವಧಿಗೆ ಮುನ್ನ ಜಾರಿಗೆ ತರುವ ಮೂಲಕ ಜನರ ಬದುಕನ್ನು ಸಂಕಷ್ಟದ ಸುಳಿಗೆ ತಳ್ಳುವ ಮೂಲಕ ನಾನಾರೀತಿ ಕಷ್ಟಪಡಲು ಕಾರಣವಾಯಿತೆಂದು ಆರೋಪಿಸಿದರು.
ಕೇಂದ್ರ ಸರ್ಕಾರ ೨೦ ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಪ್ರಕಟಿಸಿದರು ರಾಜ್ಯಗಳಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡಿಲ್ಲ ಯಾವುದೇ ರೀತಿಯಲ್ಲೂ ಸರ್ಕಾರಗಳ ನೆರವಿಗೆ ಕೇಂದ್ರ ಸರ್ಕಾರ ಭಾವಿಸಿಲ್ಲ ಎಂದು ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳಲಾಯಿತು.

ಕೋರೋಣ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ಕ್ಷಿಪ್ರ ರೀತಿಯಲ್ಲಿ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸದಸ್ಯರು ಆರೋಪಿಸಿ, ಜಿಡಿಪಿ ದರ ಹಿಂದೆಂದೂ ಕಾಣದಷ್ಟು ಪಾತಾಳಕ್ಕೆ ತಳ್ಳಲ್ಪಟ್ಟಿದೆ ಎಂದು ಟೀಕಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿದ ಆತ್ಮ ನಿರ್ಭರ ಭಾರತ ಅಭಿಯಾನ ಅಡಿಯಲ್ಲಿ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವ ಯಾವುದೇ ರೀತಿಯ ನಿರ್ದಿಷ್ಟ ಕಾರ್ಯಕ್ರಮಗಳು ಪ್ರಕಟಗೊಂಡಿಲ್ಲ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಮುಖ್ಯಸಚೇತಕ ಜೈರಾಮ್ ರಮೇಶ್ ಸೇರಿದಂತೆ ಸಿಪಿಎಂ, ಆರ್ಜೆಡಿ, ಮತ್ತಿತರ ಪ್ರತಿಪಕ್ಷಗಳ ಸದಸ್ಯರು ದೇಶದಲ್ಲಿ ಉಂಟಾಗಿರುವ ಸಂಕಷ್ಟ ಪರಿಸ್ಥಿತಿ ಕುರಿತು ಎಳೆಯಾಗಿ ಸದನದ ಗಮನಸೆಳೆದರು.