
ಕಲಬುರಗಿ:ಅ.31: 68 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನವೆಂಬರ್ 1 ರಂದು ನಡೆಯುವ ಕಾರ್ಯಕ್ರಮಕ್ಕೆ ನೆಹರು ಗಂಜ್ ಶ್ರೀ ನಗರೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಜಿಲ್ಲಾಧಿಕಾರಿ ಬಿ ಪೌಜೀಯ್ ತರನ್ನುಮ್ ಸ್ಥಳ ವೀಕ್ಷಣೆ ಮಾಡಿದರು.
ಮಂಗಳವಾರದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ನಾಡ ದೇವತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣ ನೇರವೇರಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಭೇಟಿ ನೀಡಿ ಪ್ರತಿಯೊಂದು ಸ್ಥಳ ಪರಿಶೀಲಿಸಿದರು.
ಎಲ್ಲಾ ಜಿಲ್ಲಾಮಟ್ಟ ಅಧಿಕಾರಿಗಳು ತಮಗೆ ನೀಡಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ನಗರಸಭೆ ಅಧಿಕಾರಿಗಳಿಗೆ ಸ್ವಚತೆ ಹಾಗೂ ಕುಡಿಯುವ ನೀರಿನ ಮಕ್ಕಳಿಗೆ ಎಲ್ಲಾ ರೀತಿಯಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ನಾಳೆ ನಡಯುವ ಕಾರ್ಯಕ್ರಮ ಎಲ್ಲಾ ಅಧಿಕಾರಿಗಳು ತಮ್ಮ ಕಾರ್ಯಾಲಯದಲ್ಲಿ ಧ್ವಜಾರೋಹಣ ಮಾಡಿ ನಗರೇಶ್ವ ಪೌಢ ಶಾಲೆ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಸ್.ಪಿ. ಶ್ರೀನಿವಾಸ ಅಡ್ಡೂರು, ಡಿ.ಸಿಪಿ. ಕನಿಕಾ ಸಿಕ್ರಿವಾಲ್ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ , ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾಮಟ್ಟದ ಅಧಿಕಾರಿಗಳು ಮಹಾನಗರ ಪಾಲಿಕೆ ಸಿಬ್ಬಂದಿಗಳು ಹಾಜರಿದ್ದರು.