ರಾಜ್ಯೋತ್ಸವ ಪ್ರಶಸ್ತಿಗೆ ತೀರ್ಥೆ ಆಯ್ಕೆ

ಆಳಂದ: ನ.14:ಕಲಬುರಗಿಯ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ 2022 ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಪಟ್ಟಣದ ವಿವೇಕವರ್ಧಿನಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ಕನ್ನಡ ಜಾನಪದ ಪರಿಷತ್ ತಾಲೂಕಾಧ್ಯಕ್ಷ ಅಪ್ಪಾಸಾಹೇಬ ತೀರ್ಥೆ ಪಡಸಾವಳಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ್ ಪಾಳಾ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಕಲಬುರಗಿ ಸೆಂಟ್ ಮೇರಿ ಶಾಲಾ ಆವರಣದಲ್ಲಿ ನ 15 ರಂದು ಸಾಯಂಕಾಲ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವದು ಎಂದು ಆಯೋಜಕುರು ತಿಳಿಸಿರುವರು.