ರಾಜ್ಯೋತ್ಸವ ಶಕ್ತಿ ಪ್ರಶಸ್ತಿ ಪ್ರದಾನ

ಕಲಬುರಗಿ,ನ.29: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲೆಯ ನಾಲ್ವರು ಸಾಧಕರಿಗೆ ಕರ್ನಾಟಕ ಯುವ ಶಕ್ತಿ ಸಂಘಟನೆ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಇತ್ತೀಚೆಗೆ68ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಈ ಸಮಾರಂಭದಲ್ಲಿ ಶರಣು ದೊಡ್ಡಮನಿ (ಆರೋಗ್ಯ ಕ್ಷೇತ್ರ), ಬಸವರಾಜ್ ಮಾಸ್ಟರ್ ಹೇರೂರು (ಶಿಕ್ಷಣ ಕ್ಷೇತ್ರ), ಸೈಯದ್ ರಫೀಬ್ ಸಾಬ್ (ಸಮಾಜ ಸೇವೆ) ಅವರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.ಚಿಣಮಗೇರಾ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿದ್ದ ಸಮಾರಂಭದಲ್ಲಿಗರುಡ ಪುರಾಣ ಚಿತ್ರದ ನಟ ಹಾಗೂ ನಿರ್ದೇಶಕ ಮಂಜುನಾಥ ನಾಗಲಾ, ನಟಿ ದಿಶಾ ಶೆಟ್ಟಿ, ಹಾಸ್ಯನಟ ಕೆಂಚಣ್ಣ, ಸಂಘಟನೆಯ ರಾಜ್ಯ ಗೌರವಾಧ್ಯಕ್ಷ ಚಿನ್ನಸ್ವಾಮಿ ಕನಕಪುರ, ಜಿಲ್ಲಾಧ್ಯಕ್ಷ ಅವ್ವಣ್ಣಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.