ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಡಿಕೆಶಿ

ಬಳ್ಳಾರಿ, ನ.22-ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೆ.ಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದಿಲ್ಲಿ ಹೇಳಿದ್ದಾರೆ.

‘ಉಪಚುನಾಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ಒಪ್ಪಿಕೊಳ್ಳೋಣ. ಆ ಚುನಾವಣೆಗಳಲ್ಲಿ ಪಕ್ಷ ಯಾಕೆ ಸೋತಿತು ಎಂದು ಚಿಂತಿಸಬೇಡಿ. ಅದರ ಕುರಿತು ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಬೇರೆ ಪಕ್ಷದವರು ಕಾಂಗ್ರೆಸ್ ಸೇರುತ್ತಿದ್ದಾರೆ. ಇದು ಕಾಂಗ್ರೆಸ್ ಮೇಲೆ ಜನತೆ ಇಟ್ಟ ನಂಬಿಕೆಯಾಗಿದೆ’ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಬೇರೆ ಪಕ್ಷದವರು ಕಾಂಗ್ರೆಸ್ ಸೇರುತ್ತಿದ್ದಾರೆ. ಇದು ಕಾಂಗ್ರೆಸ್ ಮೇಲೆ ಜನತೆ ಇಟ್ಟ ನಂಬಿಕೆಯಾಗಿದೆ’ ಎಂದರು.

ಬರುವ ಚುನಾವಣೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಎಂದು ನಾವು ತೀರ್ಮಾನ ಮಾಡಲ್ಲ. ನೀವೇ ತೀರ್ಮಾನ ಮಾಡಿ ಸೂಚಿಸಿದ ಹೆಸರಿನವರಿಗೆ ಟಿಕೆಟ್ ಕೊಡುತ್ತೇವೆ. ಕೆಳ ಹಂತದಿಂದ ಲೋಕಸಭಾ ಚುನಾವಣೆಗಳಲ್ಲಿ ಶ್ರಮವಹಿಸಿ ಚುನಾವಣೆ ನಡೆಸದೇ ಕೇವಲ ನಾಯಕರ ಬಾಲ ಹಿಡಿದು ಟಿಕೆಟ್ ಕೇಳಿದರೆ ಅದಕ್ಕೆ ರಾಹುಲ್ ಗಾಂಧಿ ಅವಕಾಶ ಕೊಡುವುದಿಲ್ಲ ಎಂದರು.

‘ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದೆಲ್ಲೆಡೆ ನಾವೆಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ. ಇದಕ್ಕಾಗಿ ನಾನು ಇಲ್ಲಿಂದ ಪ್ರವಾಸ ಆರಂಭ ಮಾಡಿದ್ದು, ಇದು ಕಾಂಗ್ರೆಸ್ ಪಾಲಿಗೆ ವಿಜಯದ ನಡೆಯಾಗಲಿದೆ ಎಂದರು.

ನಾಳೆ ಸೇರ್ಪಡೆ:

‘ಮಸ್ಕಿ ಕ್ಷೇತ್ರದಲ್ಲಿ ಬಸವಗೌಡ ತುರ್ವಿಹಾಳ ಅಧಿಕೃತವಾಗಿ ನಾಳೆ ಪಕ್ಷ ಸೇರಲಿದ್ದಾರೆ. ಕಾಂಗ್ರೆಸ್ ಎಂದರೆ ಅದು ದೇಶದ ಶಕ್ತಿಯಾಗಿದೆ ಎಂದರು.

ಬಿಜೆಪಿ, ಜೆಡಿಎಸ್ ನವರು ಕಾಂಗ್ರೆಸ್ ಸೇರಲು ಅನೇಕರು ನನ್ನನ್ನು ಭೇಟಿ ಆಗಿದ್ದಾರೆ. ಆಯಾ ಜಿಲ್ಲೆಗಳ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಟಿಕೆಟ್ ಕೊಡಲೇಬೇಕು ಎನ್ನುವವರಿಗೆ ಪಕ್ಷದಲ್ಲಿ ಅವಕಾಶವಿಲ್ಲ. ಆದರೆ ಪಕ್ಷದ ಸಿದ್ಧಾಂತ, ತತ್ವಗಳಿಗೆ ಬದ್ಧರಾಗಿದ್ದು, ದುಡಿಯುವವರಿಗೆ ಮಾತ್ರ ಅವಕಾಶ ನೀಡಲಾಗುವುದು’ ಎಂದರು.