ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1 ವರ್ಷ: ಸಂಭ್ರಮಾಚರಣೆ

ಸಂಜೆವಾಣಿ ವಾರ್ತೆ

ದಾವಣಗೆರೆ.ಮೇ.೨೧: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿರುವ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಇಂದು ಪಕ್ಷದ ಕಛೇರಿಯಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಜೈಕಾರ ಕೂಗಿದರು.ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆಯಿಂದಾಗಿ ಇಂದು 1 ವರ್ಷ ಯಶಸ್ವಿಯಾಗಿ ಪೂರೈಸಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದರು.ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಕೊಟ್ಟು ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲಾಗುತ್ತಿದೆ ಎಂದರು.ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುμÁ್ಠನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡಲಾಗುವುದು ಎಂದರು.ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದು ಕೋರಿದರು.ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಕಾರ್ಯದರ್ಶಿ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಆರ್.ಹೆಚ್.ನಾಗಭೂಷಣ್ ಅವರುಗಳು ಮಾತನಾಡಿ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ನಿಟ್ಟಿನಲ್ಲಿ ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದರು.