ರಾಜ್ಯ ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ- ಸಾ.ರಾ.ಗೋವಿಂದು ಸ್ಪಷ್ಟನೆ

ಬೆಂಗಳೂರು, ನ 21- ಮರಾಠ ಅಭಿವೃದ್ಧಿ ನಿಗಮ ವಾಪಸ್ ಪಡೆಯವಂತೆ ಒತ್ತಾಯಿಸಿ ಡಿ. 5 ರಂದು ಕರೆ ನೀಡಲಾಗಿರುವ ರಾಜ್ಯ ಬಂದ್ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಕನ್ನಡ ಪರ ಹೋರಾಟಗಾರ ಸಾ.ರಾ.ಗೋವಿಂದು ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಠಿಣ ಕ್ರಮ ಕೈಗೊಂಡರು ಸರಿ ಜಗ್ಗದೆ ಬಂದ್ ನಡೆಸಿಯೇ ತೀರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ರಾಜ್ಯದ ಜನರು ಬಂದ್ ಗೆ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು.ನಾಳೆ ಕನ್ನಡದ ಒಕ್ಕೂಟದ ವತಿಯಿಂದ ಬಳ್ಳಾರಿಯಲ್ಲಿ ಹೋರಾಟ ನಡೆಯಲಿದೆ. ಈ ಹೋರಾಟಕ್ಕೆ ಬೆಂಬಲ ನೀಡದವರು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಆ ರೀತಿ ಆಗುವುದು ಬೇಡ.ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಹೋರಾಡುವ ಪ್ರಯತ್ನ ಮಾಡುತ್ತೇವೆ ಸಾ.ರಾ.ಗೋವಿಂದು ಹೇಳಿದರು.