ರಾಜ್ಯ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ: ಡಾ. ಗಣೇಶ

ಸಂಜೆವಾಣಿ ವಾರ್ತೆ,
ವಿಜಯಪುರ,ಫೆ.21: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿರುವ 2024-25ನೇ ಸಾಲಿನ ರಾಜ್ಯ ಬಜೆಟ್ ಪ್ರಗತಿಪರವಾಗಿದ್ದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದೆ ಎಂದು ಮಹಿಳಾ ವಿವಿಯ ವಾಣಿಜ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗಣೇಶ ಎಸ್.ಆರ್ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕವiಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ “2024-2025ನೇ ಸಾಲಿನ ರಾಜ್ಯ ಬಜೆಟ್ ಕುರಿತ ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಆರ್.ವ್ಹಿ. ಗಂಗಶೆಟ್ಟಿ ಮಾತನಾಡಿ, 2024-25ನೇ ಕರ್ನಾಟಕ ರಾಜ್ಯದ ಆಯವ್ಯಯದಲ್ಲಿ ಉತ್ತರ ಕರ್ನಾಟಕ ಭಾಗದ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಆದ್ಯತೆಗಳ ಬಗ್ಗೆ ವಿವರಿಸಿದರು.
ವಿವಿ ಆವರಣದ ಕೆನರಾ ಬ್ಯಾಂಕ್ ತೊರವಿ ಶಾಖೆಯ ಮ್ಯಾನೇಜರ್ ಶರದ ನಾಡಗೌಡ ಅತಿಥಿಗಳಾಗಿ ಮಾತನಾಡಿ, ಬಜೆಟ್‍ನ ಪ್ರಾಮುಖ್ಯತೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಯಾದಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮೊಗಲಪ್ಪಾ ಎ.ಪಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತು ವಿವಿಧ ವಿಭಾಗದÀ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಮುಂಗಡ ಪತ್ರದ ನೇರ ಪ್ರಸಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜ್ಯೋತಿ ಬಸೀನಕರ ಸ್ವಾಗತಿಸಿದರು. ಮಾಬುಬಿ ಮುಲ್ಲಾ ನಿರೂಪಿಸಿದರು. ಜ್ಯೋತಿಬಾಯಿ ನಾಯಕ ವಂದಿಸಿದರು.