ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಂಜುಳಾ ಐರೋಡಗಿ

ಇಂಡಿ:ನ.17: ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜರುಗಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮೇಲಾಟದ ಕ್ರೀಡಾಕೂಟದಲ್ಲಿ ತಾಲೂಕಿನ ನಾದ ಕೆ ಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ವರ್ಗದ ವಿದ್ಯಾರ್ಥಿನಿ ಕುಮಾರಿ ಮಂಜುಳಾ ಐರೊಡಗಿ 3000 ಮೀ.ಓಟದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಮುಖ್ಯ ಶಿಕ್ಷಕರಾದ ಸಿ.ಎಂ. ಬಂಡಗರ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಇಂತಹ ಅಪರೂಪದ ಸಾಧನೆ ಮಾಡಿದ್ದು ನಮಗೆಲ್ಲ ಹೆಮ್ಮೆ ತಂದಿದೆ ಎಂದ ಅವರು ರಾಜ್ಯ ಮಟ್ಟದಲ್ಲಿ ಜಯಶಾಲಿ ಆಗಲಿ ಎಂದು ಶುಭ ಹಾರೈಸಿದ್ದಾರೆ. ಹಾಗೆಯೇ 10 ನೇ ವರ್ಗದ ಕುಮಾರ ಶಿವರಾಯ ಕಾಂಬಳೆ ಈತನು ಉದ್ದ ಜಿಗಿತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ಮಾರ್ಗದರ್ಶನ ಮಾಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್. ಎಸ್. ಹಚಡದ ಅವರಿಗೆ ಎಸ್ ಡಿ ಎಂ ಸಿ ಅಧ್ಯಕ್ಷರು,ಸದಸ್ಯರು ಮತ್ತು ಮುಖ್ಯ ಗುರುಗಳು ಮತ್ತು ಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.