ರಾಜ್ಯ ಮಟ್ಟಕ್ಕೆ ಆಯ್ಕೆ


ಧಾರವಾಡ.ಮಾ.25:ಪದವಿ ಪೂರ್ವ ಶಿಕ್ಷಣ ಇಲಾಖೆ ಧಾರವಾಡ ಹಾಗೂ ವಿದ್ಯಾ ಪಿ. ಹಂಚಿನಮನಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಬಾಲಕ/ ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾವಳಿ ಮಲ್ಲಸಜ್ಜನ ವ್ಯಾಯಾಮ ಶಾಲೆಯಲ್ಲಿ ಜರುಗಿತು.
ಬಾಲಕಿಯರ ವಿಭಾಗದಲ್ಲಿ ನಮ್ಮ ನಮ್ಮ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ದ್ವೀತಿಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ನಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ನ.ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ.ಅಜಿತ ಪ್ರಸಾದ,ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವಾಯ್.ಎಸ್.ರಾಯಬಾಗಿ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಯವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.