ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ

ಕಲಬುರಗಿ,ಜ.16-ಬೆಂಗಳೂರಿನ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇದ್ರದಲ್ಲಿ ಇತ್ತೀಚಿಗೆ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಮಟ್ಟದ ಕ್ರೀಡಾ ಕೂಟದ ವಾಲಿಬಾಲ್ ಕ್ರೀಡೆಯಲ್ಲಿ ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿಯ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ, ಜಿಲ್ಲಾ ಸಮನ್ವಾಧಿಕಾರಿ ಶಿವರಾಮ ಚಹ್ವಾಣ, ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಬಗಲಿ, ಅರ್ಜುಣಗಿ ಕಾಲೇಜಿನ ಪ್ರಾಚಾರ್ಯ ಮಲಕಪ್ಪ ಬಿರಾದಾರ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿದ್ದಾರೆ.