ರಾಜ್ಯ ಮಟ್ಟದ ಕ್ರೀಡಾಕೂಟ : ಲಕ್ಷ್ಮೀ ಉತ್ತಮ ಸಾಧನೆ

ಕಲಬುರಗಿ:ಜ.20: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ಮಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ಹೈಜಂಪ್ ಮತ್ತು ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ್ ಪ್ರಥಮ ವರ್ಷದ ಕಲಾ ವಿಭಾಗದ ವಿದ್ಯಾರ್ಥಿನಿ ಲಕ್ಷ್ಮೀ ಸುಭಾಷ್ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾಳೆ.

    ವಿದ್ಯಾರ್ಥಿನಿಯ ಸಾಧನೆಗೆ ಸಿಬಿಸಿ ಅಧ್ಯಕ್ಷರು ಆದ ಶಾಸಕ ಡಾ.ಅಜಯಸಿಂಗ, ಸಿಬಿಸಿ ಉಪಾಧ್ಯಕ್ಷ ರವೀಂದ್ರ ವೈ. ಕೋಳಕೂರ್, ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಪ್ರಾಚಾರ್ಯ ಮಹ್ಮದ್ ಅಲ್ಲಾಉದ್ದೀನ್ ಸಾಗರ, ತಾಲೂಕಾ ಬಿಸಿಎಂ ಅಧಿಕಾರಿ ಶಕುಂತಲಾ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ರವೀಂದ್ರಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ಸಿದ್ದಾರೂಡ ಬಿರಾದಾರ, ರಾಮಚಂದ್ರಪ್ಪ ಟಿ.ಹಕ್ಕಿ, ದೇವೇಂದ್ರಪ್ಪ ಬಡಿಗೇರ್, ರಂಜಿತಾ ಠಾಕೂರ್, ಸಮೀನಾ ಬೇಗಂ, ಪ್ರ.ದ.ಸ ನೇಸರ ಎಂ.ಬೀಳಗಿಮಠ, ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಹೇಶಕುಮಾರ ಚಿಂಚೋಳಿ, ಮೌಲಾನಾ ಆಜಾದ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ನಾಯಕ, ಸೇರಿದಂತೆ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.