ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಸದಸ್ಯರಾಗಿ ಡಾ.ಮುಮ್ತಾಜ್ ಬೇಗಂ

ಕೊಪ್ಪಳ, ಸೆ,21:ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ಲೇಖಕಿ ಡಾ.ಮುಮ್ತಾಜ್ ಬೇಗಂ ಅವರನ್ನ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯನ್ನು ಪುನರಚಿಸಿ ಸಾರ್ವಜನಿಕ ಶಿಕ್ಷಣ ಹಾಗೂ ಸಾಕ್ಷರತ ಇಲಾಖೆ ಆದೇಶಿಸಿದೆ.
ಹಿರಿಯ ಸಾಹಿತಿ ಡಾ.ಕರೀಗೌಡ ಬೀಚನಹಳ್ಳಿ ಅವರನ್ನು ನೂತನ ಪುಸ್ತಕ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಒಟ್ಟು 16 ಜನರ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.