ರಾಜ್ಯ ಮಟ್ಟದ ರೋಲರ್ ಸ್ಕೇಟಿಂಗ್ ನಲ್ಲಿ ಕಂಚಿನ ಪದಕ

ಕಲಬುರಗಿ,ಮಾ.18-ಕಳೆದ ತಿಂಗಳು 6 ಮತ್ತು 7 ರಂದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಕ್ರೀಡಾಕೂಟದಲ್ಲಿ (14 ರಿಂದ 17 ವರ್ಷದ ಬಾಲಕರ ವಿಭಾಗ) ನಗರದ ಚಂದ್ರಶೇಖರ ಪಾಟೀಲ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಹರ್ಷ ಕದಮ್ ಗೆಲವು ಸಾಧಿಸಿದ್ದಾನೆ.
10,00 ಮೀಟರ್ ರೋಲರ್ ಸ್ಕೇಟಿಂಗ್ ನಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶಾಲೆಯ ಮುಖ್ಯೋಪಾಧ್ಯಾಯರಾದ ಕುಮುದಿನಿ ಎಸ್.ಎಸ್.ಮಠ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.