ರಾಜ್ಯ ಮಟ್ಟದ ವಿಜ್ಞಾನ ಮೇಳಕ್ಕೆ ಹೆಬ್ಬಾಳ ವಸತಿ ಶಾಲೆಯ ವಿದ್ಯಾರ್ಥಿಗಳು

ಕಲಬುರಗಿ: ಫೆ 22 :ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಇತ್ತೀಚಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ಎಕ್ಸ್ ಪೆÇ ಕಾರ್ಯಕ್ರಮದಲ್ಲಿ ಚಿತ್ತಾಪುರ ತಾಲೂಕಿನ ಹೆಬ್ಬಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚಿಗೆ ನಡೆದ ವಿಜ್ಞಾನ ಮೇಳದಲ್ಲಿ” ದ ಕನ್ಸೆಪ್ಟ್ ಆಪ್ ದಿ ಸಸ್ಟೆನೆಬಿಲಿಟಿ” ಎಂಬ ವಿಷಯ ಕುರಿತು ತಯಾರಿಸಿದ ಮಾದರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿಗಳ ಈ ಸಾಧನೆಗೆ ವಸತಿ ಶಾಲೆಯ ಪ್ರಾಚಾರ್ಯ ಶಿವರಾಮ ಚವ್ಹಾಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಭು ದೊರೆ, ಜಿಲ್ಲಾ ಸಮನ್ವಯಾಧಿಕಾರಿ ಶಿವಪುತ್ರಪ್ಪ ಕಕ್ಕಳಮೇಲಿ, ಮಾಹಿತಿ ಸಹಾಯಕರಾದ ಆನಂದ ಕೊಡೆಕಲ್, ಕುಮಾರ ಸ್ವಾಮಿ ಹಿರೇಮಠ ಸೇರಿದಂತೆ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.