ರಾಜ್ಯ ಯುವ ಪ್ರಶಸ್ತಿ ಪುರಸ್ಕøತರ ಬೋರ್ಡ್ ಅಳವಡಿಸಲು ನಿರ್ಧಾರ

ಬೀದರ್:ಜ.13: ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರು ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರ ಹೆಸರಿನ ಬೋರ್ಡ್ ಅಳವಡಿಸಲು ನಿರ್ಧಾರ ಕೈಗೊಳ್ಳಲಾಯಿತು.
ಗುರುವಾರ ರಾಷ್ಟ್ರಿಯ ಯುವ ದಿನ ಹಾಗೂ ಸಪ್ತಾಹ ಆಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರ ಯಾದಿಯುಲ್ಲ ಬೋರ್ಡ್‍ಗಳನ್ನು ಅಲ್ಲಿಯ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಅಳವಡಿಸಲಾಗಿದ್ದು, ಈ ಕಾರ್ಯ ಹಿಂದೆನೇ ಆಗಬೇಕಿತ್ತು. ಕೂಡಲೇ ಈ ಕಾರ್ಯ ಪೂರ್ಣಗೊಳಿಸುವಂತೆ ರಾಜ್ಯ ಯುವ ಪ್ರಶಸ್ತಿ ಪುರಸ್ಕøತರೂ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸಲಹೆ ನೀಡಿದರು.
ಪ್ರತಿ ವರ್ಷ ನಡೆಯುವ ರಾಷ್ಟ್ರೀಯ ಯುವ ದಿನ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಯುವ ಪ್ರಶಸ್ತಿ ಪುರಸ್ಕøತರ ಹೆಸರು ಹಾಕಬೇಕೆಂದು ಇನ್ನೋರ್ವ ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ವಿರುಪಾಕ್ಷ ಗಾದಗಿ ಸಲಹೆ ನೀಡಿದರು.
ಪ್ರತಿ ವರ್ಷ ಇಲಾಖೆ ವತಿಯಿಂದ ಜರುಗುವ ಜಿಲ್ಲಾ ಮಟ್ಟದ ಯುವಜನೋತ್ಸವ ಹಾಗೂ ಯುವ ಜನ ಮೇಳ ಕಾರ್ಯಕ್ರಮದಲ್ಲಿ ಯುವ ಪ್ರಶಸ್ತಿ ಪುರಸ್ಕøತರಿಗೆ ಅವ್ಹಾನ ನೀಡಬೇಕು. ಆದರೆ ಇತ್ತಿಚೀಗೆ ನಗರದಲ್ಲಿ ನಡೆದ ಇಂತಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕøತ ಹೆಸರು ಸೇರಿಸದೇ ಅವಮಾನವಾಗಿದೆ. ಮುಂಬರುವ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಿರಲಿ ಎಂದು ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ಮಹೇಶ ಗೋರ್ನಾಳಕರ್ ತಿಳಿಸಿದರು.
ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಗೌತಮ ಅರಳಿ ಮಾತನಾಡಿ, ರಾಷ್ಟ್ರೀಯ ಯುವ ಸಪ್ತಾಹ ನಿಮಿತ್ಯ ಜಿಲ್ಲಾ ಪಂಚಾಉಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಲಹೆ ಮೆರೆಗೆ ವಿವೇಕಾನಂದರ ಭಾವಚಿತ್ರವಿರುವ ಪೆಂಟಿಂಗ್ ಸ್ಪರ್ಧೆ ಏರ್ಪಡಿಸಲಾಗುವುದು. ಇದರಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತಿಯ ಬಹುಮಾನ ನೀಡಲಾಗುವುದೆಂದು ತಿಳಿಸಿದರು.
ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತ ಓಂಪ್ರಕಾಶ ರೊಟ್ಟೆ, ಪ್ರಭುಲಿಂಗ ಬಿರಾದಾರ, ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ಮೌಲಪ್ಪ ಮಾಳಗೆ, ಸುನಿಲ ಬಾವಿಕಟ್ಟಿ, ಕಲಾವಿದ ವಿಜಯಕುಮಾರ ಸೋನಾರೆ,ಇಲಾಖೆಯ ಸಿಬ್ಬಂದಿಗಳಾದ ಪದ್ಮಾವತಿ, ಖುದ್ದುಸ್, ಸತೀಶ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.