ರಾಜ್ಯ ಯೋಜನಾ ಮಂಡಳಿಗೆ ಪ್ರೊ. ಶರಣಪ್ಪ ಹಲಸೆ ನೇಮಕ

ದಾವಣಗೆರೆ ಸೆ.೧೬; ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರನ್ನು ರಾಜ್ಯ ಯೋಜನಾ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯಮಂತ್ರಿಗಳು ಮಂಡಳಿಯ ಅಧ್ಯಕ್ಷರಾಗಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ಉಪಾಧ್ಯಕ್ಷರಾಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ, ಆರ್ಥಿಕ, ಯೋಜನಾ ಕಾರ್ಯಕ್ರಮ, ಯೋಜನೆ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ದಾವಣಗೆರೆ ವಿವಿ ಕುಲಪತಿ ಪ್ರೊ. ಶರಣಪ್ಪ ಹಲಸೆ, ಬೆಂಗಳೂರು ಕೃಷಿ ವಿವಿ ಕುಲಪತಿ ಪ್ರೊ. ಎಸ್. ರಾಜೇಂದ್ರಕುಮಾರ, ದಾವಣಗೆರೆಯ ಡಾ.ಸಿ.ಆರ್. ನಜೀರ್ ಅಹಮ್ಮದ್ ಸೇರಿದಂತೆ ಇನ್ನಿತರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.